ಬೆಂಗಳೂರು: ಕಳೆದ ಒಂದೂವರೆ ತಿಂಗಳಿನಿಂದ ಸೀರಿಯಲ್, ರಿಯಾಲಿಟಿ ಶೋ ಶೂಟಿಂಗ್ ನಿಲ್ಲಿಸಲಾಗಿತ್ತು. ಇದೀಗ ಅದಕ್ಕೆ ಅನುಮತಿ ನೀಡಿದ್ದು, ನಾಳೆಯಿಂದ ಶೂಟಿಂಗ್ ಗೆ ಅವಕಾಶ ನೀಡಲಾಗಿದೆ.
ಈಗಾಗ್ಲೇ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿರುವುದ್ರಿಂದ, ಇದೀಗ ಧಾರವಾಹಿ, ರಿಯಾಲಿಟಿ ಶೋಗಳ ಶೂಟಿಂಗ್ ಗೆ ಅನುಮತಿ ನೀಡಲಾಗಿದೆ. ಕೆಲವು ಷರತ್ತುಗಳೊಂದಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಒಳಾಂಗಣ ಚಿತ್ರೀಕರಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ.