ಇಂದಿನಿಂದ ಹೊಸ ಸಂಸತ್ ಭವನದಲ್ಲಿ ಅಧಿವೇಶನ

195

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸೆಪ್ಟೆಂಬರ್ 18ರಿಂದ 22ರ ತನಕ ಐದು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗಿದೆ. ಸೋಮವಾರ ಕಳೆದ 75 ವರ್ಷಗಳಿಂದ ಅಧಿವೇಶನ ನಡೆಸಿಕೊಂಡು ಬರುತ್ತಿರುವ ಭಾರತದ ಪ್ರಜಾಪ್ರಭುತ್ವದ ಕಿರೀಟವಾಗಿರುವ ಹಳೆಯ ಸಂಸತ್ ಭವನದಲ್ಲಿ ಕೊನೆಯ ಸದನ ನಡೆಯಿತು.

ಹಳೆಯ ಕಟ್ಟಡದಲ್ಲಿ ನಡೆದ ಸದನದಲ್ಲಿ ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಕುರಿತು ಮಂಡಿಸಲಾಯಿತು. ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಶೇಕಡ 33ರಷ್ಟು ಮಹಿಳಾ ಮೀಸಲಾತಿ ಮಸೂದೆ ಮಂಡಿಸಲಾಗಿದೆ. ಇದನ್ನು ಪಕ್ಷಾತೀತವಾಗಿ ಎಲ್ಲರೂ ಸ್ವಾಗತಿಸಿದ್ದಾರೆ. ಇನ್ನು ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!