ಸಿಎಂ ಬೊಮ್ಮಾಯಿಗೆ ಅಧಿವೇಶನ ಸವಾಲು

223

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸೋಮವಾರದಿಂದ ಮಳೆಗಾಲದ ಅಧಿವೇಶನ ಶುರುವಾಗಲಿದೆ. ಮುಖ್ಯಮಂತ್ರಿಯಾದ ಮೇಲೆ ಬಸವರಾಜ್ ಬೊಮ್ಮಾಯಿಗೆ ಇದು ಮೊದಲ ಅಧಿವೇಶನವಾಗಿದೆ. ಹೀಗಾಗಿ ಪ್ರತಿಪಕ್ಷಗಳು ನೀಡುವ ಪೆಟ್ಟುಗಳಿಗೆ ಅವರು ಸಿದ್ಧರಾಗಬೇಕಿದೆ.

ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಪ್ರತಿಪಕ್ಷಗಳ ವಾಗ್ದಾಳಿಗೆ ಎದುರುತ್ತರ ನೀಡುತ್ತಾ ಅವರ ಬೆಂಬಲಕ್ಕೆ ನಿಲ್ಲುತ್ತಿದ್ದರು. ಈಗ ಅವರೆ ಸಿಎಂ ಆಗಿರುವುದರಿಂದ ಒಂದಿಷ್ಟು ಸವಾಲುಗಳಿವೆ. ಆದರೆ, ಕಳೆದ 3 ದಿಶಕಗಳಿಂದ ರಾಜಕೀಯದಲ್ಲಿದ್ದಾರೆ. ಶಾಸಕರಾಗಿ, ಸಚಿವರಾಗಿ ಅಧಿವೇಶನ ಎದುರಿಸಿದ್ದು, ವಿರೋಧ ಪಕ್ಷಗಳ ಅಸ್ತ್ರಕ್ಕೆ ಪ್ರತ್ಯಸ್ತ್ರ ನೀಡುವ ಸಾಧ್ಯತೆಯಿದೆ.

ಇನ್ನು ವಿಪಕ್ಷಗಳು, ಕೋವಿಡ್ ನಿಯಂತ್ರಣದಲ್ಲಿ ವಿಫಲ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ, ಭ್ರಷ್ಟಾಚಾರ, ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ರಾಜಕೀಯ ನಾಯಕರ ನಡುವಿನ ಗುದ್ದಾಟ, ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ, ಜಾತಿ ಜನಗಣತಿ ಬಿಡುಗಡೆ ವಿಚಾರ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಸೇರಿದಂತೆ ಹಲವು ವಿಚಾರಗಳ ಮೇಲೆ ಮುಂದಿನ 10 ದಿನಗಳ ಕಾಲ ಕಾಂಗ್ರೆಸ್, ಜೆಡಿಎಸ್ ಸರ್ಕಾರವನ್ನು ಕಟ್ಟಿ ಹಾಕಲು ಸಜ್ಜಾಗಿದೆ.


TAG


Leave a Reply

Your email address will not be published. Required fields are marked *

error: Content is protected !!