ಯುವತಿ ಎದುರು ಅಸಭ್ಯವಾಗಿ ವರ್ತಿಸಿದ ವ್ಯಕ್ತಿ

107

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನ ಮುಂದೆ ಬಂದ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಕಾರಿನಲ್ಲಿ ಯುವತಿ ಕುಳಿತುಕೊಂಡಿದ್ದಾಳೆ ಎನ್ನುವುದು ಗೊತ್ತಿದ್ದು, ಆಕೆ ಎದುರು ಬಂದು ಲೈಂಗಿಕ ದೌರ್ಜನ್ಯವೆಸಗುವ ರೀತಿಯಲ್ಲಿ ವರ್ತಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಮಹದೇವಪುರ ಬಾಗ್ಮನೆ ಕಾನ್ ಸ್ಟೆಲೇಷನ್ ಬ್ಯುಸಿನೆಸ್ ಪಾರ್ಕ್ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಕಾರು ಪಾರ್ಕ್ ಮಾಡಲಾಗಿದೆ. ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಕಾರಿನಲ್ಲಿ ಯುವತಿ ಇರುವುದನ್ನು ಗಮನಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ನಂತರ ಕಾರಿನ ಸುತ್ತ ತಿರುಗಾಡಲು ಶುರು ಮಾಡಿದ್ದಾನೆ. ಯುವತಿ ಕಾರಿನಲ್ಲಿ ಅವಿತುಕೊಂಡು ಸ್ನೇಹಿತರಿಗೆ ಫೋನ್ ಮಾಡಿದ್ದಾಳೆ. ಅವರು ಬರುವಷ್ಟರಲ್ಲಿ ಆತ ಪರಾರಿಯಾಗಿದ್ದಾನೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವ ಯುವತಿ ಹಾಗೂ ಪೋಷಕರು, ಮಹದೇವಪುರ ಠಾಣೆ ಪೊಲೀಸರು ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!