ಬ್ರಿಜ್ ಭೋಷಣಗೆ ಕೋರ್ಟ್ ನೋಟಿಸ್

103

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಕುಸ್ತಿ ಫಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದೆ. ರೋಸ್ ಅವೆನ್ಯೂ ಕೋರ್ಟ್ ಸಮನ್ಸ್ ನೀಡಿದೆ.

ಇಂದು ನಡೆದ ವಿಚಾರಣೆಯಲ್ಲಿ ಇವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷಿಗಳಿವೆ. ಹೀಗಾಗಿ ಜುಲೈ 18ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈಗಾಗ್ಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಲಂಪಿಕ್ ಪದಕ ವಿಜಯೇತ ಕುಸ್ತಿಪಟುಗಳು ಹಲವು ಬಾರಿ ಪ್ರತಿಭಟನೆ ನಡೆಸಿದ್ದು, ರಾಷ್ಟ್ರವ್ಯಾಪಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಂಧಿಸದ ಸಂಬಂಧ ಆಕ್ರೋಶಗಳು ವ್ಯಕ್ತವಾಗಿವೆ.




Leave a Reply

Your email address will not be published. Required fields are marked *

error: Content is protected !!