ಶೆಹಬಾಜ್ ಷರೀಫ್ ಪಾಕ್ ನೂತನ ಪ್ರಧಾನಿ

197

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಕರಾಚಿ: ಬಹುಮತ ಸಾಬೀತು ಪಡಿಸುವಲ್ಲಿ ಇಮ್ರಾನ್ ಖಾನ್ ವಿಫಲವಾದ ಬಳಿಕ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ಪಾಕಿಸ್ತಾನ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ ಆಗಿದ್ದಾರೆ. ವಿಪಕ್ಷ ನಾಯಕ, ಪಿಎಂಎಲ್ಎನ್ ಮುಖ್ಯಸ್ಥ ಶೆಹಬಾಜ್ ಷರೀಫ್ ರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಸೋಮವಾರವೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಇಮ್ರಾನ್ ಖಾನ್ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದ ಯಾವೊಬ್ಬ ಅಧಿಕಾರಿಯೂ ಅನುಮತಿ ಇಲ್ಲದೆ ದೇಶ ತೊರೆದು ಹೋಗುವಂತಿಲ್ಲವೆಂದು ಹೈಅಲರ್ಟ್ ಘೋಷಿಸಲಾಗಿದೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಷರೀಫ್, ಜನತೆಗೆ, ಪಕ್ಷದ ಸದಸ್ಯರಿಗೆ ಹಾಗೂ ಮಾಧ್ಯಮಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!