ಶಕ್ತಿ ಯೋಜನೆ ಜಾರಿ, ಜು.1ರಿಂದ ಗೃಹಜ್ಯೋತಿ: ಸಿಎಂ ಸಿದ್ದರಾಮಯ್ಯ

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ಇಂದಿನಿಂದ ಅದು ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಸಾಮಾಜಿಕ, ಆರ್ಥಿಕ ಅಸಮಾನತೆ ಹೊಂದಿದ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಹೆಚ್ಚು ತೊಡಗಿಸಿಕೊಳ್ಳಬೇಕು. 5 ಗ್ಯಾರೆಂಟಿಗಳಲ್ಲಿ 4 ಗ್ಯಾರೆಂಟಿಗಳು ಮಹಿಳೆಯರಿಗೆ ಉಪಯೋಗವಾಗಲಿದೆ ಎಂದರು.

ಇನ್ನು ಜುಲೈ 1ರಿಂದ ಗೃಹಜ್ಯೋತಿ ಯೋಜನೆ ಮಾಡುತ್ತೇವೆ. ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡುತ್ತೇವೆ ಅಂತಾ ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ನಾವು ನೀಡಿದ 5 ಗ್ಯಾರೆಂಟಿಗಳ ಆಶ್ವಾಸನೆಯನ್ನು ಈಡೇರಿಸುತ್ತೇವೆ. ಇದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ನಿರುದ್ಯೋಗಿ ಪದವೀಧರರಿಗೆ, ಡಿಪ್ಲೋಮಾದವರಿಗೆ ಗೌರವ ಧನ ನೀಡಲಾಗುವುದ ಅಂತಾ ತಿಳಿಸಿದರು. ಈ ವೇಳೆ ಅವರು ರಾಜಸ್ಥಾನದ ಪೇಟ ಧರಿಸಿ ಮಿಂಚಿದರು.

ಈ ವೇಳೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!