ಆಲಮೇಲದಲ್ಲಿ ಕುರಿ ಕಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಇಬ್ಬರು

693

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಕಾರಿನಲ್ಲಿ ಬಂದ ಕಳ್ಳರು ಕುರಿಗಳನ್ನು ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಸಿಕ್ಕಿಬೀಳುವ ಸಂದರ್ಭದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಕುರಿಗಳ ಮಾಲೀಕ ಹಾಗೂ ಸ್ಥಳೀಯರು ಮತ್ತೊಂದು ಕಾರಿನಲ್ಲಿ ಬೆನ್ನು ಹತ್ತಿ ಇಬ್ಬರು ಕಳ್ಳರನ್ನು ಹಿಡಿದಿದ್ದಾರೆ. ಇದೇ ವೇಳೆ ಆಕ್ರೋಶಗೊಂಡ ಸ್ಥಳೀಯರು ಕಾರನ್ನು ಜಖಂಗೊಳಿಸಿದ್ದಾರೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರು ಮಾಲೀಕನಿಗೆ ಬರಲು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.


TAG


Leave a Reply

Your email address will not be published. Required fields are marked *

error: Content is protected !!