ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನ: ಸಿಎಂ ಸಂತಾಪ

302

ಪ್ರಜಾಸ್ತ್ರ ಸುದ್ದಿ

ಹಾವೇರಿ: ಹೃದಯಾಘಾತದಿಂದಾಗಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ(61) ಅವರು ಶನಿವಾರ ನಿಧನರಾಗಿದ್ದಾರೆ. ಸವಣೂರು ಪಟ್ಟಣದ ಮನೆಯಲ್ಲಿದ್ದಾಗ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಉದ್ಯಮಿಯಾಗಿದ್ದ ರಾಜಶೇಕರ ಸಿಂಧೂರ 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಇವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಸಜ್ಜನ ಜನಾನುರಾಗಿ ಶಾಸಕರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!