ಶಿವಮೊಗ್ಗದಲ್ಲಿ 2 ದಿನ ನಿಷೇಧಾಜ್ಞೆ

316

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಭಜರಂಗದಳದ ಕಾರ್ಯಕಾರ್ತನ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುವಾರದಿಂದ ಶನಿವಾರ ಬೆಳಗ್ಗೆ 10 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಹೀಗಾಗಿ 5ಕ್ಕಿಂತ ಹೆಚ್ಚು ಜನ ಸೇರಿದ್ರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಇದುವರೆಗಿನ ಗಲಾಟೆಯಲ್ಲಿ 11 ಮಂದಿಗೆ ಗಾಯಗಳಾಗಿವೆ. ಹಲವಾರು ವಾಹನಗಳು ಜಖಂಗೊಂಡಿವೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೂರ್ವ ವಲಯದ ಐಜಿಪಿ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!