ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡೆಂದ ಬಿಎಸ್ವೈ

347

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಹೆಸರು ಇಡಲಾಗುವುದು, ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧಗಳು ಕೇಳಿ ಬರುತ್ತಿವೆ.

ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರು ಇಡುವುದಕ್ಕೆ ಸ್ವತಃ ಅವರೆ ಬೇಡವೆಂದು ತಿಳಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ರಾಷ್ಟ್ರಕ್ಕೆ, ನಾಡಿಗೆ ಅಪಾರ ಕೊಡುಗೆ ನೀಡಿದ ಮಹನೀಯರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಯಡಿಯೂರಪ್ಪನವರ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಬೆಂಬಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!