ಶಿವಮೊಗ್ಗ ವಿಮಾನ ನಿಲ್ದಾಣದ ವಿಶೇಷತೆ ಏನು?

143

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಂದ ಇಂದು ಉದ್ಘಾಟನೆಗೊಂಡ ಶಿವಮೊಗ್ಗ ವಿಮಾನ ನಿಲ್ದಾಣ ಸಾಕಷ್ಟು ವಿಶೇತೆಗಳನ್ನು ಹೊಂದಿದೆ. ಇದು ರಾಜ್ಯದ 8ನೇ ವಿಮಾನ ನಿಲ್ದಾಣ ಅನ್ನೋ ಹೆಗ್ಗಳಿಕೆ ಪಡೆದಿದೆ. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಬಳ್ಳಾರಿ ನಂತರ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.

ಈ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 775 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದೆ. ಎಲ್ಲ ರೀತಿಯ ಸಕಲ ವ್ಯವಸ್ಥೆಗಾಗಿ 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. 4,320 ಚದರ ಅಡಿ ವಿಸ್ತೀರ್ಣದ ಪ್ಯಾಂಸಜರ್ ಟರ್ಮಿನಲ್ ಇದೆ. 3,200 ಮೀಟರ್ ಉದ್ದದ ರನ್ ವೇ ಹೊಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಕ 2ನೇ ಅತಿ ದೊಡ್ಡ ರನ್ ವೇ ಹೊಂದಿದ ವಿಮಾನ ನಿಲ್ದಾಣವಾಗಿದೆ.

ಏರಿಯಲ್ ವೀವ್ ಮೂಲಕ ನೋಡಿದರೆ ಕಮಲದ ಆಕೃತಿಯಲ್ಲಿ ವಿಮಾನ ನಿಲ್ದಾಣ ಕಾಣಿಸುತ್ತೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು 80ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಇಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸಿದರು.




Leave a Reply

Your email address will not be published. Required fields are marked *

error: Content is protected !!