ಪೊಲೀಸರ ಮೇಲೆ ಹಲ್ಲೆಗೆ ಯತ್ನ, ರೌಡಿಶೀಟರ್ ಕಾಲಿಗೆ ಗುಂಡೇಟು

129

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕಳೆದ ಮೇ 8ರಂದು ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು ಹಾರಿಸಿ ವಶಖ್ಕೆ ಪಡೆಯಲಾಗಿದೆ.

ಶೋಯಬ್ ಅಲಿಯಾಸ್ ಅಂದಾ ಅನ್ನೋ ಆರೋಪಿ ಮೇಲೆ ಗುಂಡು ಹಾರಿಸಲಾಗಿದೆ. ಗ್ಯಾಂಗ್ ವಾರ್ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದಾನೆ. ಇದುವರೆಗೂ ಎರಡು ತಂಡಗಳಿಂದ 16 ಆರೋಪಿಗಳನ್ನು ಬಂಧಿಸಲಾಗಿದೆ.

ಗ್ರಾಮೀಣ ಠಾಣೆ ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್ ಟೇಬಲ್ ಅಣ್ಣಪ್ಪ ತಾಲೂಕಿನ ಬೀರನಕೆರೆ ಗ್ರಾಮದ ಮನೆಯೊಂದರಲ್ಲಿದ್ದ ಶೋಯಬ್ ಬಂಧಿಸಲು ಹೋಗಿದ್ದಾಗ, ಆಯುಧವೊಂದರಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಪಿಎಸ್ಐ ಕುಮಾರ್ ಗುಂಡು ಹಾರಿಸಿದ್ದಾರೆ. ಆರೋಪಿ ಹಾಗೂ ಗಾಯಗೊಂಡ ಹೆಡ್ ಕಾನ್ಸ್ ಟೇಬಲ್ ಅಣ್ಣಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!