ಕ್ರೇಜ್ ಹುಟ್ಟಿಸಿದ ಶಿವಣ್ಣ-ರಜನಿ ಸಿನ್ಮಾ ಟೈಟಲ್

215

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಸಂಚ್ಯುರಿ ಸ್ಟಾರ್ ಶಿವಣ್ಣ ಹಾಗೂ ತಮಿಳುನಾಡು ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಚಿತ್ರದ ಟೈಟಲ್ ಲಾಂಚ್ ಮಾಡಲಾಗಿದ್ದು, ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಸಿದೆ. ಜೈಲರ್ ಎಂದು ಹೆಸರಿಡಲಾಗಿದ್ದು, ಫಸ್ಟ್ ಲುಕ್ ಸಹ ರಿಲೀಸ್ ಮಾಡಲಾಗಿದೆ.

ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸನ್ ಪಿಕ್ಚರ್ಸ್ ಇದನ್ನು ನಿರ್ಮಾಣ ಮಾಡುತ್ತಿದೆ. ಇದೊಂದು ಪಕ್ಕಾ ಮಾಸ್ ಮೂವಿ ಅನ್ನೋದಕ್ಕೆ ಫಸ್ಟ್ ಲುಕ್ ಉತ್ತರ ಹೇಳುತ್ತಿದೆ. ಅದರಲ್ಲೂ ಶಿವಣ್ಣ-ರಜನಿ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.

ರಜನಿಕಾಂತ್ ಅವರು ನನ್ನನ್ನು ಬಾಲ್ಯದಿಂದಲೂ ನೋಡಿದ್ದಾರೆ. ಅವರೊಂದಿಗೆ ಸ್ಕ್ರೀನ್ ಹಂಚಿಕೊಳ್ಳುವುದಕ್ಕೆ ಖುಷಿಯಾಗುತ್ತದೆ. ಸಿನಿಮಾದಲ್ಲಿ ಪಾತ್ರ ಹೇಗೆ ಇರಲಿ. ಚಿತ್ರದ ಒಂದು ಭಾಗವಾಗಿರುವುದು ಖುಷಿ ಇದೆ. ಇದರಿಂದಾಗಿ ನಮ್ಮಿಬ್ಬರನ್ನು ಒಟ್ಟಿಗೆ ನೋಡಿ ಅಭಿಮಾನಿಗಳು ಖುಷಿ ಪಡುತ್ತಾರೆ ಎಂದು ಶಿವಣ್ಣ ಹೇಳಿದ್ದಾರೆ. ಇನ್ನು ರಜನಿಕಾಂತ್ ಅವರ 169ನೇ ಚಿತ್ರವಾಗಿದೆ.




Leave a Reply

Your email address will not be published. Required fields are marked *

error: Content is protected !!