ಬ್ರೇಕಿಂಗ್ ನ್ಯೂಸ್: ಸಿಂದಗಿಯಲ್ಲಿ ಮತ್ತೆ ಕಳ್ಳರ ಕೈಚಳಕ

364

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಬಸವೇಶ್ವರ ಸರ್ಕಲ್ ಹತ್ತಿರ ಇರುವ ಎಸ್ಎಸ್ ಜನರಲ್ ಸ್ಟೋರ್ಸ್ ನಲ್ಲಿ ಕಳ್ಳತನ ನಡೆಸಲಾಗಿದೆ. ಅಂಗಡಿ ಮೇಲಿನ ಶೀಟ್ ಕತ್ತರಿಸಿ ಕಳೆದ ರಾತ್ರಿ ಕಳ್ಳತನ ಮಾಡಲಾಗಿದೆ. ಮುಂಜಾನೆ ಸುಮಾರು 9 ಗಂಟೆಗೆ ಅಂಗಡಿ ತೆಗೆದು ನೋಡಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ.

ಅಂಗಡಿಯಲ್ಲಿನ ಸುಮಾರು 16 ಸಾವಿರ ರೂಪಾಯಿ, 50 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ಅಂಗಡಿ ಮಾಲೀಕ ಶಿವು ಹೇಳಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚೆಗೆ ಮನೆಯೊಂದರಲ್ಲಿ ಚಿನ್ನಾಭರಣ ಹಾಗೂ ನಗದು ಕಳ್ಳತನ ನಡೆಸಲಾಗಿತ್ತು. ಅದು ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.




Leave a Reply

Your email address will not be published. Required fields are marked *

error: Content is protected !!