ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ನೂರಾರು ಬಾಣಂತಿಯರ ಪರದಾಟ

293

ಪ್ರಜಾಸ್ತ್ರ ಸುದ್ದಿ

ಹಾವೇರಿ: ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದಾಗಿ ನೂರಾರು ಬಾಣಂತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಹೊರಗೆ ಬರಲು ಪರದಾಟ ನಡೆಸಿದರು. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅನಾಹುತ ಸಂಭವಿಸಿದ್ದು, ಕೆಲಕಾಲ ಸಾಕಷ್ಟು ಆತಂಕ ಸೃಷ್ಟಿಸಿತ್ತು.

ಅಪಾಯದ ಮುನ್ಸೂಚನೆ ಅರಿತ ಬಾಣಂತಿಯರು ತಮ್ಮ ಕಂದಮ್ಮಗಳನ್ನು ತೆಗೆದುಕೊಂಡು ಹೊರಗೆ ಓಡಿ ಬಂದಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆಯಿಲ್ಲದ ಕಾರಣಕ್ಕೆ, ಆವರಣದಲ್ಲಿಯೇ ಹಸುಗೂಸುಗಳನ್ನು ತೆಗೆದುಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.




Leave a Reply

Your email address will not be published. Required fields are marked *

error: Content is protected !!