ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್ ಹತ್ತಿರ ಇರುವ ವಿಜಯ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಇಂದು ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಇಲ್ಲಿನ ನಾಟೀಕಾರ ಕಾಂಪ್ಲೆಕ್ಸ್ ನಲ್ಲಿರುವ ವಿಜಯ ಹಂಚನಾಳ ಮಾಲೀಕತ್ವದ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅನಾಹುತ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.