ಶ್ರೀ ಸಿದ್ಧಾರೂಢರ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

268

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಕಳೆದ ಎರಡೂವರೆ ತಿಂಗಳ ನಂತರ ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳು ತೆರೆದಿವೆ. ಅದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಶ್ರೀ ಸಿದ್ಧಾರೂಢರ ಮಠಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.

ಸಿದ್ಧಾರೂಢರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಇಂದು ಮುಂಜಾನೆಯಿಂದಲೇ ಭಕ್ತರು ಬರುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಸಿದ್ದಪ್ಪಜ್ಜರ ದರ್ಶನ ಪಡೆದು ಹೋಗ್ತಿದ್ದು, ಮುಂಜಾಗೃತ ಕ್ರಮವಾಗಿ ಮಠದಲ್ಲಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

ಸರ್ಕಾರದ ಮಾರ್ಗಸೂಚಿ ಅನ್ವಯದಂತೆ ಸಾಮಾಜಿಕ ಅಂತರ ಸೇರಿದಂತೆ ಮಾಸ್ಕ್ ಧರಿಸಿಕೊಂಡು ಭಕ್ತರು ಬರ್ತಿದ್ದು, ಎರಡೂವರೆ ತಿಂಗಳ ಬಳಿಕ ದೇವರ ದರ್ಶನ ಮಾಡ್ತಿರುವುದಕ್ಕೆ ಸಂತಸವನ್ನ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!