ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ!

106

ಪ್ರಜಾಸ್ತ್ರ ಸುದ್ದಿ

ವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಎಲ್ಲವೂ ಸುಖಾಂತ್ಯವಾಗಿದೆಯಂತೆ. ಸಿದ್ದರಾಮಯ್ಯ ಸಿಎಂ, ಡಿ.ಕೆ ಶಿವಕುಮಾರ್ ಡಿಸಿಎಂ ಎಂದು ಹೇಳಲಾಗುತ್ತಿದೆ.

ಖರ್ಗೆ ಅವರ ಟ್ವೀಟರ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5 ಕೋಟಿ ಕನ್ನಡಿಗರಿಗೆ ನೀಡಿದ 5 ಗ್ಯಾರೆಂಟಿಗಳನ್ನು ನಾವು ಜಾರಿಗೊಳಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ್ ನಿವಾಸದಲ್ಲಿ ಎಲ್ಲರೂ ಒಟ್ಟಿಗೆ ಊಟ ಮಾಡಿದ್ದಾರೆ. ಆದರೆ, ಹೈಕಮಾಂಡ್ ತೀರ್ಮಾನ ತಮಗೆ ಒಪ್ಪಿಗೆ ಆಗಿಲ್ಲ. ಆದರೆ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ಒಪ್ಪಿಕೊಂಡಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಲಾಗುವುದು ಎನ್ನುವ ಮೂಲಕ ತಮ್ಮ ಅಸಮಾಧಾನವನ್ನು ಡಿಕೆಶಿ ಸಹೋದರ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!