ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಹಿನ್ನೆಲೆ ಎಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಇಂದು ಸಂಜೆಯೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಒಂದು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.