ಸರ್ಕಾರ ದಿವಾಳಿ.. ರಾಜೀನಾಮೆ ಕೊಡಿ: ಮಾಜಿ ಸಿಎಂ

366

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಭರ್ಜರಿಯಾಗಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬಿ.ಎಸ್ ಯಡಿಯೂರಪ್ಪನವರು ನಿನ್ನೆ, ಸರ್ಕಾರದ ಬಳಿ ಹಣವಿಲ್ಲವೆಂದು ರೈತರ ಬಳಿ ಅಸಹಾಯಕತೆ ಹೊರ ಹಾಕಿದ್ರು. ಇದಕ್ಕೆ ಮಾಜಿ ಸಿಎಂ ಸಿದ್ದು ಟ್ವೀಟ್ ನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ನಿಮ್ಮ ಜಗಳದಲ್ಲಿ ಕರ್ನಾಟಕ ಯಾಕೆ ಬಲಿಕೊಡುತ್ತೀರಿ? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ. ನ್ಯಾಯಬದ್ದ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟು ಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನ ಶಿಕ್ಷಿಸಬೇಡಿ ಎಂದು ಫುಲ್ ಜೋರಾಗಿ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!