‘ಸದಾನಂದಗೌಡ, ರೇಣುಕಾಚಾರ್ಯ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಕ್ಕಿಬಿದ್ದಿದ್ದಾರೆ’

278

ಪ್ರಜಾಸ್ತ್ರ ಸದ್ದಿ

ಕಾರವಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯ ಇಬ್ಬರು ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಅದಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇವರಿಬ್ಬರು ಸೆಕ್ಸ್ ಸ್ಕ್ಯಾಂಡಲ್, ಭ್ರಷ್ಟಾಚಾರ ಅಥವ ಇನ್ಯಾವುದೋ ಅಪರಾಧದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ವಿಡಿಯೋದಲ್ಲಿ ಗ್ರಾಫಿಕ್ಸ್ ಮಾಡುವುದಾದರೆ ಇವರದ್ಯಾಕ ಮಾಡಬೇಕು? ಬೇರೆಯವರದು ಯಾಕೆ ಮಾಡಲ್ಲ? ಬಿಜೆಪಿಯಂತಹ ಸಂಸ್ಕೃತಿ ಇಲ್ಲದ ಜನ ಬೇರೆ ಯಾರೂ ಇಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!