ಸಿದ್ದು ವಿಪಕ್ಷ ನಾಯಕ.. ಡಿಕೆಶಿಗೆ ಕೆಪಿಸಿಸಿ ಪಟ್ಟ..?

518

ಬೆಂಗಳೂರು: ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಅನ್ನೋ ಮಾತು ರಾಜಕೀಯ ಪಡಸಾಲೆಯಲ್ಲಿ ಭರ್ಜರಿಯಾಗಿ ಕೇಳಿ ಬರ್ತಿದೆ. ನಾಳೆಯೊಳಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ಮತ್ತು ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಆಗಬೇಕಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಫಿಕ್ಸ್ ಆಗಿದ್ದು, ಯಾವಾಗ ಬೇಕಾದ್ರೂ ಘೋಷಣೆಯಾಗಬಹುದು ಅಂತಾ ಹೇಳಲಾಗ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಹೀಗಾಗಿ ಎಲ್ಲರಲ್ಲಿ ಕುತೂಹಲ ಮೂಡಿದೆ. ನಾಳೆಯಿಂದ ಜಂಟಿ ಅಧಿವೇಶನ ನಡೆಯಲಿದೆ. ಇದ್ರಿಂದಾಗಿ ಪಕ್ಷದ ಪ್ರಮುಖ ಸ್ಥಾನಗಳಿಗೆ ಆಯ್ಕೆ ನಡೆದಿದ್ದು, ವಿರೋಧ ಪಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ್ನಾಗಿ ಸಿದ್ದರಾಮಯ್ಯ ನೇಮಕ ಬಹುತೇಕ ಖಚಿತವಾಗಿದೆ.

ಇನ್ನು ಇಬ್ಬರು ಕಾರ್ಯದರ್ಶಿಗಳ ನೇಮಕ ಸಹ ನಾಳೆಯೊಳಗೆ ಆಗಲಿದೆಯಂತೆ. ಒಟ್ನಲ್ಲಿ ಡಿಕೆಶಿ ಕೆಪಿಸಿಸಿ ಸಾರಥ್ಯ ಮತ್ತು ಸಿದ್ದರಾಮಯ್ಯ ವಿಪಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನಾಗುವುದು ಪಕ್ಕಾ ಆಗಿದ್ದು, ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ.




Leave a Reply

Your email address will not be published. Required fields are marked *

error: Content is protected !!