ಸಿಂದಗಿ ಉಪ ಚುನಾವಣೆ: ಬಂಜಾರ ಸಮುದಾಯದ ಸಮಾವೇಶ

215

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಧಾನಸಭಾ ಉಪ ಚುನಾವಣೆಯ ಪ್ರಚಾರ ಕೊನೆಯ ಹಂತಕ್ಕೆ ಬಂದಿದೆ. ಹೀಗಾಗಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸಿದ್ದು, ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಂಜಾರ ಸಮುದಾಯದ ಬೃಹತ್ ಸಮಾವೇಶ ನಡೆಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಾಜಿ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ಶಾಸಕ ಭೀಮಾ ನಾಯಕ ಹಾಗೂ ಮಹಿಳಾ ನಾಯಕಿ ಶಿವಕಾಂತಮ್ಮ(ಕಾಂತಾ ನಾಯಿಕ್) ಮಾತನಾಡಿದರು.

ಅಪಾರ ಸಂಖ್ಯೆಯಲ್ಲಿ ಸೇರಿದ್ದ ಬಂಜಾರ ಸಮುದಾಯದಲ್ಲಿ ಮನವಿ ಮಾಡಿಕೊಂಡ ಮುಖಂಡರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವ ಮೂಲಕ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡರು.




Leave a Reply

Your email address will not be published. Required fields are marked *

error: Content is protected !!