Search

ಸಿಂದಗಿ ಉಪ ಕದನ: ಮುಗಿಲು ಮುಟ್ಟಿದ ಬಿಜೆಪಿ ಕಾರ್ಯಕರ್ತರ ಸಂಭ್ರಮ

215

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಒಟ್ಟು 22 ಸುತ್ತುಗಳಲ್ಲಿ 17 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಒಂದು ರೀತಿಯಲ್ಲಿ ಬಹುತೇಕ ಗೆಲುವಿನ ನಗೆ ಬೀರುವ ಸಾಧ್ಯತೆಯಿದೆ.

17ನೇ ಸುತ್ತಿನವರೆಗೂ ರಮೇಶ ಭೂಸನೂರ 74,463 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 49,897 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3116 ಮತಗಳನ್ನು ಪಡೆದಿದ್ದಾರೆ.

ಇದರಿಂದಾಗಿ ಬಿಜೆಪಿ ಅಭ್ಯರ್ಥಿಯು 24,556 ಸಾವಿರಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಸಿಂದಗಿ ಸೇರಿದಂತೆ ಎಲ್ಲೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!