ಸಿಂದಗಿಯ ಇಬ್ಬರು ವಿದ್ಯಾರ್ಥಿನಿಯರ ಚಿನ್ನದ ಪದಕ ಸಾಧನೆ

521

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ 2013 ಹಾಗೂ 2015ನೇ ವಿದ್ಯಾರ್ಥಿಗಳಾದ ವಿಜಯಲಕ್ಷ್ಮೀ ಜೋಗೂರ ಹಾಗೂ ಸ್ವಾತಿ ಲಿಂಗರಾಜ ಅವರು ಎಂ.ಟೆಕ್ ಹಾಗೂ ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಕಲಬುರಗಿಯ ಶರಣಬಸಪ್ಪ ಅಪ್ಪ ಡಿಮ್ಸ್ ವಿಶ್ವವಿದ್ಯಾಲಯದಿಂದ ಈ ಇಬ್ಬರು ವಿದ್ಯಾರ್ಥಿನಿಯರು ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯರಿಗೆ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಮುಖ್ಯಸ್ಥರಾದ ಪರಮಪೂಜ್ಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರಾಚಾರ್ಯ ಎಸ್.ಸಿ ಸಣ್ಣಹಳ್ಳಿ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಅಭಿನಂದನೆಗಳನ್ನು ಸಲ್ಲಿಸಿದೆ.




Leave a Reply

Your email address will not be published. Required fields are marked *

error: Content is protected !!