ಸಿಂದಗಿ ಪುರಸಭೆ ಅಧ್ಯಕ್ಷರಾಗಿ ಹಣಮಂತ ಸುಣಗಾರ ಆಯ್ಕೆ

316

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಸೋಮವಾರ ನಡೆದ ಚುನಾವಣೆಯಲ್ಲಿ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ 6ನೇ ವಾರ್ಡ್ ಸದಸ್ಯ ಹಣಮಂತ ಸುಣಗಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೋರ್ಟ್ ಆದೇಶದಂತೆ ಮಾರ್ಚ್ 6ರಂದು ನಡೆದ ಪುರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಹಣಮಂತ ಯಮನಪ್ಪ ಸುಣಗಾರ ಒಬ್ಬರೆ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಹಶೀಲ್ದಾರ್ ನಿಂಗಣ್ಣ ಬಿರಾದಾರ ಘೋಷಿಸಿದರು.

ಒಟ್ಟು 23 ಸದಸ್ಯರಲ್ಲಿ ಓರ್ವ ಸದಸ್ಯೆ ವಿಜಯಲಕ್ಷ್ಮೀ ನಾಗೂರ ಗೈರಾಗಿದ್ದರು. ಶಾಸಕ ರಮೇಶ ಭೂಸನೂರ ಅಧ್ಯಕ್ಷ ಆಯ್ಕೆ ಸಭೆಗೆ ಹಾಜರಿದ್ದು ಬೆಂಬಲ ಸೂಚಿಸಿದರು.

ಕಳೆದ‌ ಫೆಬ್ರವರಿ 23ರಂದು ಈ ಹಿಂದಿನ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಿರುದ್ಧ ಕೋರ್ಟ್ ಆದೇಶದಂತೆ ಅವಿಶ್ವಾಸ ಮಂಡನೆ ಸಭೆ ನಡೆಸಲಾಗಿತ್ತು. ಅಂದು 18 ಸದಸ್ಯರು ಅವಿಶ್ವಾಸ ಪರ ಮತ ಚಲಾಯಿಸಿದ್ದರು. ಹೀಗಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ನೂತನ ಅಧ್ಯಕ್ಷರ ಅವಧಿ ಮೇ 4ರ ತನಕ ಇದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!