ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆ, ಸಿಎಂ ಹೇಳಿದ್ದೇನು?

112

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಮುಖ್ಯಮಂತ್ರಿ ಆದ ಮೇಲೆ ಸಿದ್ದರಾಮಯ್ಯನವರು ಇದೆ ಮೊದಲ ಬಾರಿಗೆ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಸಂಬಂಧ ಮರುತನಿಖೆಯಾಗಬೇಕು ಅನ್ನೋ ಕೂಗು ಎದ್ದಿದೆ. ಈ ಬಗ್ಗೆ ಮಾತನಾಡಿದ ಸಿಎಂ, ಈ ಪ್ರಕರಣದ ತನಿಖೆಯನ್ನು ಸಿಬಿಐ ಮಾಡಿದೆ. ಕೋರ್ಟ್ ತೀರ್ಪುಗೆ ಮೇಲ್ಮನವಿ ಸಲ್ಲಿಸಲು ಕುಟುಂಬದವರು ಒತ್ತಾಯಿಸಿದ್ದಾರೆ. ನಾನು ಇನ್ನು ತೀರ್ಪು ಓದಿಲ್ಲ. ಅದನ್ನು ನೋಡಿ, ಮುಂದಿನ ಕ್ರಮ ಏನು ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡಲಾಗುತ್ತೆ ಎಂದಿದ್ದಾರೆ.

ಇನ್ನು ಕರಾವಳಿ ಭಾಗದಲ್ಲಿ ನೈತಿಕ ಪೊಲೀಸಗಿರಿ ಹೆಚ್ಚಾಗಿದೆ. ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಹೀಗಾಗಿ ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದರು. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ, ಅನಗತ್ಯವಾಗಿ ತೋಜೋವಧೆ, ಅಪಪ್ರಚಾರ, ಆರೋಪಗಳನ್ನು ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಉಡುಪಿ, ದಕ್ಷಿಣ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ಎಲ್ಲ ವಿಚಾರಗಳನ್ನು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!