ಪಿಎಫ್ಐ ಪರ ಮಾತನಾಡಿದರೆ ಕಠಿಣ ಕ್ರಮ: ಡಿಜಿಪಿ ಪ್ರವೀಣ್ ಸೂದ್

164

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರ ಗೃಹ ಇಲಾಖೆ ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ಇದರ ಬಗ್ಗೆ ಮಾತನಾಡಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ಈಗಾಗ್ಲೇ ರಾಜ್ಯದ ಅನೇಕ ಕಡೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಕೆಲವರನ್ನು 10, 15, 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದಿದ್ದಾರೆ. ಹೀಗಾಗಿ ಪಿಎಫ್ಐ ಪರವಾಗಿ ಮಾತನಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇನ್ನು ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಅನ್ನೋ ಕಾರಣಕ್ಕೆ ಪಿಎಫ್ಐ ಹಾಗೂ 8 ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!