ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾರ್ಚ್ 25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿವೆ. ಹೀಗಾಗಿ ಕೆಎಸ್ಆರ್ ಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ಸಂಬಂಧ ಸಾರಿಗೆ ಇಲಾಖೆಯ ಅಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಊರುಗಳಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ತೆರಳಲು ಅವಕಾಶ ಮಾಡಿಕೊಡಲಾಗಿದೆ. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಮಾರ್ಚ್ 25ರಿಂದ ಏಪ್ರಿಲ್ 6ರ ತನಕ ಪರೀಕ್ಷೆಗಳು ನಡೆಯುತ್ತಿವೆ. ಈ ಸಂಬಂಧ ಸಾರಿಗೆ ಇಲಾಖೆಯ ಚಾಲಕರು, ನಿರ್ವಾಹಕರಿಗೆ, ಸಿಬ್ಬಂದಿಗೆ ಸೂಚಿಸಲಾಗಿದೆ.