ಅನಿರ್ಧಿಷ್ಟವರೆಗೂ ಎಸ್ಎಸ್ಎಲ್ ಸಿ ಪರೀಕ್ಷೆ ಮುಂದೂಡಿಕೆ

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಜೂನ್ 21ರಂದು ನಿಗದಿಯಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮುಂದೂಡಲಾಗಿದೆ. ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ ತಿಳಿಸಿದ್ದಾರೆ.

ವಿದ್ಯಾರ್ಥಿಗಳು, ಪೋಷಕರು, ವಿವಿಧ ಶಾಲಾ ಸಂಘಟನೆಗಳ ಆತಂಕವನ್ನ ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ. ವಿದ್ಯಾರ್ಥಿಗಳು ಆತಂಕಗೊಳ್ಳದೆ ಪರೀಕ್ಷೆ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!