10ನೇ ತರಗತಿ ಪರೀಕ್ಷೆ: ಮೇ 2ನೇ ವಾರದಲ್ಲಿ ಫಲಿತಾಂಶ

393

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಿತು. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್ ಕೊನೆ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಮಾರ್ಚ್ 28ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿವೆ. ಮೊದಲ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ ಶೇಕಡ 98ರಷ್ಟಿದೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ, ಮೇ 2ನೇ ವಾರದಲ್ಲಿ ಫಲಿತಾಂಶ. ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದರು.




Leave a Reply

Your email address will not be published. Required fields are marked *

error: Content is protected !!