ಎಸ್ಎಸ್ಎಲ್ ಸಿ ಪರೀಕ್ಷೆಗೆ ಕ್ಷಣಗಣನೆ

384

ಪ್ರಜಾಸ್ತ್ರ ಸುದ್ದಿ

ವಿಜಯಪುರ: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು ಬರುತ್ತಿದ್ದು, ಪೋಷಕರು ಸಹ ಮಕ್ಕಳೊಂದಿಗೆ ಬಂದು ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಪರೀಕ್ಷೆಗಳು ನಡೆದಿರಲಿಲ್ಲ. ಈ ಬಾರಿ ಎಂದಿನಂತೆ ಶೈಕ್ಷಣಿಕ ವರ್ಷ ನಡೆದಿದ್ದು, 8,73,846 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ.

ಬೆಳಗ್ಗೆ 10.30ರಿಂದ 1.30ರ ತನಕ ಪ್ರಥಮ ಭಾಷೆ ಹಾಗೂ ಐಚ್ಛಿಕ ವಿಷಯಗಳು ನಡೆಯಲಿವೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರ ತನಕ ಕೋರ್ ವಿಷಯಗಳ ಪರೀಕ್ಷೆ ನಡೆಯಲಿವೆ. ಏಪ್ರಿಲ್ 11 ಕೊನೆಯ ಪರೀಕ್ಷೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!