ಪರೀಕ್ಷೆ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ

419

ಪ್ರಜಾಸ್ತ್ರ ಸುದ್ದಿ

ಮೈಸೂರು: ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಕುಸಿದು ಬಿದ್ದ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಮಗಳನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

ಸಾಂದರ್ಭಿಕ ಚಿತ್ರ




Leave a Reply

Your email address will not be published. Required fields are marked *

error: Content is protected !!