ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಾಳೆಯಿಂದ ಪ್ರಾರಂಭವಾಗ್ತಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪನವರು ಶುಭ ಕೋರಿದ್ದಾರೆ.
ಟ್ವೀಟರ್ ಮೂಲಕ ಶುಭ ಕೋರಿರುವ ಸಿಎಂ, ವಿದ್ಯಾರ್ಥಿಗಳಿಗೆ ಪರೀಕ್ಷೆ ಟೈಂನಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನ ಪಾಲನೆ ಮಾಡಿಯೆಂದು ತಿಳಿಸಿದ್ದಾರೆ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನ ಆತಂಕ ಮತ್ತು ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಶುಭ ಕೋರಿದ್ದಾರೆ.