ಎಸ್ಎಸ್ಎಲ್ ಸಿ ಫಲಿತಾಂಶ: ನಾಲ್ವರು ರಾಜ್ಯಕ್ಕೆ ಪ್ರಥಮ

121

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2023ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಒಟ್ಟಾರೆಯಾಗಿ ಶೇಕಡ 83.89ರಷ್ಟು ಫಲಿತಾಂಶವಾಗಿದೆ. ಚಿತ್ರದುರ್ಗ ಪ್ರಥಮ ಸ್ಥಾನ ಪಡೆದರೆ ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಎಂದಿನಂತೆ ಬಾಲಕಿಯರೆ ಮೇಲುಗೈ ಸಾಧಿಸಿದ್ದು, ಶೇಕಡ 87.87ರಷ್ಟು ಪಾಸಾಗಿದ್ದಾರೆ. ಬಾಲಕರು ಶೇಕಡ 80.08ರಷ್ಟು ತೇರ್ಗಡೆಯಾಗಿದ್ದಾರೆ.

ಇನ್ನು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಆಕ್ಸ್ ಫರ್ಡ್ ಇಂಗ್ಲಿಷ್ ಶಾಲೆಯ ಭೀಮನಗೌಡ ಹನುಮಂತಗೌಡ ಪಾಟೀಲ, ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕುಮಾರೇಶ್ವರ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ, ಚಿಕ್ಕಬಳ್ಳಾಪುರದ ಬಾಲಗಂಗಾಧರನಾಥ ಪ್ರೌಢಶಾಲೆಯ ಯಶಸ್ ಗೌಡ ಹಾಗೂ ಬೆಂಗಳೂರಿನ ನ್ಯೂ ಮೆಕಲ್ ಇಂಗ್ಲಿಷ್ ಸ್ಕೂಲ್ ನ ಭೂಮಿಕಾ ಪೈ ಶೇಕಡ 100ಕ್ಕೆ ನೂರರಷ್ಟು ಫಲಿತಾಂಶ ಪಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!