ಈ ದಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

227

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಣೆ ಈ ಬಾರಿ ಸ್ವಲ್ಪ ತಡವಾಗಿದೆ. ಮೇ 15ರೊಳಗೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇತ್ತು. ಆದರೆ, ಇದೀಗ ಮೇ 19ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಮೌಲ್ಯಮಾಪನದಲ್ಲಿನ ಸಣ್ಣಪುಟ್ಟ ದೋಷ ಸರಿಪಡಿಸುವುದು, ಅಂಕ ದಾಖಲೀಕರಣ ಸೇರಿದಂತೆ ಒಂದಿಷ್ಟು ಕೆಲಸಗಳಿಂದ ಸ್ವಲ್ಪ ತಡವಾಗಿದೆ. ಮೇ 19ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!