ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದೆ. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೊಬ್ಬನ ಶವ ಮನೆಯ ಕೊಠಡಿಯಲ್ಲಿ ಪತ್ತೆಯಾಗಿದೆ. ಸಾಗರ ತಾಲೂಕಿನ ಯಡೇಹಳ್ಳಿಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಪರಶುರಾಮ ಬಾಬು(16) ಮೃತ ಬಾಲಕ. ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ. ಓದಿನಲ್ಲಿಯೂ ಚೆನ್ನಾಗಿದ್ದನಂತೆ. ಆದರೆ, ಇಂದು ಪರೀಕ್ಷೆಯಬೇಕಾಗಿದ್ದ ವಿದ್ಯಾರ್ಥಿ ಸಾವಿಗಿಡಾಗಿರುವುದು ಅನುಮಾನ ಮೂಡಿಸಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.