ಪ್ರಜಾಸ್ತ್ರ ಸುದ್ದಿ
ಯಾದಗಿರಿ: ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಹಾಲ್ ಟಿಕೆಟ್ ಪಡೆದುಕೊಂಡು ವಾಪಸ್ ಮನೆಗೆ ಬರುವಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾಳೆ. ಗುರುಮಠಕಲ್ ತಾಲೂಕಿನ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ(16) ಅನ್ನೋ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಸರ್ಕಾರಿ ಉರ್ದು ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದು, ಜುಲೈ 19ರಂದು ನಡೆಯುವ ಪರೀಕ್ಷೆಯ ಹಾಲ್ ಟಿಕೆಟ್ ಪಡೆದುಕೊಂಡು ಊರಿಗೆ ಬರಲು ಬಸ್ ಸ್ಟಾಪ್ ನಲ್ಲಿ ನಿಂತಿದ್ದಾಳೆ. ಈ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.