ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ?

94

ಪ್ರಜಾಸ್ತ್ರ ಸುದ್ದಿ

ಚಿತ್ತಾಪುರ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾಸ್ಟೆಲ್ ನಲ್ಲಿರುವ ಮಂಚಕ್ಕೆ ಬಾಲಕಿ ನೇಣು ಹಾಕಿಕೊಂಡಿದ್ದಾಳೆ. ಇದು ಹಲವು ಅನುಮಾನಗಳನ್ನು ಮೂಡಿಸಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳಾ ಅಥವ ಬೇರೆ ಏನಾದರೂ ನಡೆದಿದ್ಯಾ ಅನ್ನೋ ಶಂಕೆ ಮೂಡಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!