ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

167

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ನಡೆಸುವ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ. ಜೂನ್ 27ರಿಂದ ಜುಲೈ 4ರ ತನಕ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ ಈ ರೀತಿ ಇದೆ.

ಜೂನ್ 27 : ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
ಜೂನ್ 28 : ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ
ಜೂನ್ 29 : ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ)
ಜೂನ್ 30 : ಸಮಾಜಶಾಸ್ತ್ರ
ಜುಲೈ 1 : ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಜುಲೈ 2 : ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜುಲೈ 4 : ಗಣಿತ, ಸಮಾಜಶಾಸ್ತ್ರ




Leave a Reply

Your email address will not be published. Required fields are marked *

error: Content is protected !!