ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಸುಮಾರು 62 ಸ್ಟಾರ್ ಹೋಟೆಲ್ ಗಳಿಗೆ ವಿದ್ಯುತ್ ಹಾಗೂ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ ಹೇಳಿದ್ದಾರೆ. 62 ಸ್ಟಾರ್ ಹೋಟೆಲ್ ಗಳಿಗೆ ಕೈಗಾರಿಕೆ ಸ್ಥಾನಮಾನ ನೀಡಿ ವಿದ್ಯುತ್ ಹಾಗೂ ಕಟ್ಟಡದ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದಿದ್ದಾರೆ.
ಕರೋನಾನಿಂದಾಗಿ ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಸೇರಿದಂತೆ ಇತರೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಅವುಗಳ ಚೇತರಿಕೆಗಾಗಿ ಕೈಗಾರಿಕೆ ವ್ಯಾಪ್ತಿಗೆ ತಂದು ವಿದ್ಯುತ್ ಹಾಗೂ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.