ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸುತ್ತಿರುವ 2022-23ನೇ ಸಾಲಿನ ಬಜೆಟ್ ನಲ್ಲಿ ಯಾವ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೃಷಿ ಇಲಾಖೆಗೆ 33,700 ಕೋಟಿ ರೂಪಾಯಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,713 ಕೋಟಿ ರೂಪಾಯಿ
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 17,325 ರೂಪಾಯಿ
ವಸತಿ ಇಲಾಖೆಗೆ 3,594 ರೂಪಾಯಿ
ಆಹಾರ ಇಲಾಖೆಗೆ 2,288 ಕೋಟಿ ರೂಪಾಯಿ
ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂಪಾಯಿ
ಇಂಧನ ಇಲಾಖೆಗೆ 12,655 ಕೋಟಿ ರೂಪಾಯಿ
ಕಂದಾಯ ಇಲಾಖೆಗೆ 16,388 ಕೋಟಿ ರೂಪಾಯಿ
ಲೋಕೋಪಯೋಗಿ ಇಲಾಖೆಗೆ 10,447 ಕೋಟಿ ರೂಪಾಯಿ
ಉಳಿದಂತೆ ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ, ತಾಲೂಕುಗಳ ಅಭಿವೃದ್ದಿಗೆ 3 ಸಾವಿರ ಕೋಟಿ ರೂಪಾಯಿ ಹಾಗೂ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.