‘ಕಾಂಗ್ರೆಸ್ ಆರೋಪಕ್ಕೆ ಸದನದಲ್ಲೇ ಉತ್ತರ ನೀಡುತ್ತೇನೆ’

416

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಮೀಸಲು ಇಡಲಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು, ನಾವು ಹೋರಾಟ ಮಾಡಿದ್ದರಿಂದಲೇ ಅನುದಾನ ಘೋಷಣೆ ಮಾಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಆರೋಪಕ್ಕೆ ವಿಧಾನಸೌಧದಲ್ಲೇ ಉತ್ತರ ನೀಡುತ್ತೇನೆ ಎಂದರು.

ಇನ್ನು ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವ ಕೆಲಸ ನಡೆದಿದೆ. ಆದಷ್ಟು ಬೇಗ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!