ಬೈಲಹೊಂಗಲದಲ್ಲಿ ವಿಚಿತ್ರ ಬಲೂನ್ ಪತ್ತೆ

163

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ವಿಚಿತ್ರ ಬಲೂನ್ ವೊಂದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿತ್ತು. ಈ ರೀತಿಯ ಬಲೂನ್ ಅನ್ನು ಗ್ರಾಮಸ್ಥರು ಇದುವರೆಗೂ ನೋಡಿಲ್ಲ. ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಬಲೂನ್ ಪರಿಶೀಲನೆ ನಡೆಸಿದಾಗ ಅದರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬಲೂನ್ ಹಾಗೂ ಅದರಲ್ಲಿ ಪತ್ತೆಯಾದ ವಸ್ತುಗಳನ್ನು ಬೆಳಗಾವಿಗೆ ತೆಗೆದುಕೊಂಡು ಬಂದಿದ್ದು ಪರಿಶೀಲನೆ ನಡೆಸಲಾಗುತ್ತಿದೆ.

ಜರ್ಮನ್, ಯುಎಸ್ಎ, ಚೀನಾದಲ್ಲಿಯೂ ಇದೆ ರೀತಿಯ ಬಲೂನ್ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಕಂಡು ಬಂದ ಬಲೂನ್ ಹೋಲಿಕೆಯಂತೆ ಅಂತಾನು ಮಾತನಾಡಿಕೊಳ್ಳಲಾಗುತ್ತಿದ್ದು, ಈ ಕುರಿತು ತನಿಖೆ ನಡೆದಿದ್ದು ಶೀಘ್ರದಲ್ಲಿ ಮಾಹಿತಿ ಸಿಗಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!