ಬ್ರೇಕಿಂಗ್ ನ್ಯೂಸ್: ಅಕ್ಕಮಹಾದೇವಿ ವಿವಿ ವಿದ್ಯಾರ್ಥಿನಿ ನೇಣಿಗೆ ಶರಣು

555

ಪ್ರಜಾಸ್ತ್ರ ಸುದ್ದಿ

ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ವಿವಿಯ ಎಂಕಾಂ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಕಲಬುರಗಿ ಮೂಲದ 23 ವರ್ಷದ ಐಶ್ವರ್ಯ ಅನ್ನೋ ವಿದ್ಯಾರ್ಥಿನಿ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾಳೆ.

ವಿಶ್ವವಿದ್ಯಾಲಯ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ನಾಳೆ ಕೊನೆಯ ಪರೀಕ್ಷೆ ಎದುರಿಸಬೇಕಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಳೆದ 2 ದಿನಗಳ ಹಿಂದೆಯಷ್ಟೇ ವಿವಿ ಘಟಿಕೋತ್ಸವ ನಡೆದಿದೆ. ಈ ಬಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!