ನಾಲ್ಕಂತಸ್ತಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

564

ಜಮಖಂಡಿ: ವಸತಿ ನಿಲಯದ ನಾಲ್ಕಂತಸ್ತಿನ ಕಟ್ಟದಿಂದ ಹಾರಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಮಖಂಡಿ ನಗರದಲ್ಲಿ ನಡೆದಿದೆ. 17 ವರ್ಷದ ಪ್ರಿಯಾಂಕಾ ಮೇತ್ರಿ ಸಾವನ್ನಪ್ಪಿರುವ ವಿದ್ಯಾರ್ಥಿನಿ.

ಜಮಖಂಡಿಯ ರಾಯಲ್ ಪ್ಯಾಲೆಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿನಿಯಾಗಿದ್ಳು. ಇದೆ ಕಾಲೇಜಿಗೆ ಸೇರಿದ ವಸತಿ ನಿಲಯದ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾಳೆ ಅಂತಾ ಹೇಳಲಾಗ್ತಿದೆ. ಮೃತ ಪ್ರಿಯಾಂಕಾ ಮೇತ್ರಿ, ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ನಿವಾಸಿಯಾಗಿದ್ದಾಳೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿರಬಹುದು ಎನ್ನಲಾಗ್ತಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸ್ರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಯಲ್ ಪ್ಯಾಲೆಸ್ ಕಾಲೇಜು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಅವರಿಗೆ ಸೇರಿದ್ದಾಗಿದೆ.




Leave a Reply

Your email address will not be published. Required fields are marked *

error: Content is protected !!