ಸೂಕ್ತ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

161

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಸರಿಯಾದ ಸಮಯಕ್ಕೆ ಬಸ್ ಬರದೆಯಿರುವ ಕಾರಣಕ್ಕೆ ನಿತ್ಯ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಿಸಿದ್ದಾರೆ.

ಬಸ್ ಸಮಸ್ಯೆ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಶಾಲಾ, ಕಾಲೇಜಿಗೆ ಸರಿಯಾಗಿ ಹೋಗಲು ಆಗದೆ ವಿದ್ಯಾರ್ಥಿಗಳು ಪರದಾಟ ನಡೆಸಿದ್ದಾರೆ. ಶುಕ್ರವಾರ ಬಸ್ ತಡೆದು ತಮ್ಮ ಆಕ್ರೋಶ ಹೊರ ಹಾಕಿದರು. ಸೂಕ್ತವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.




Leave a Reply

Your email address will not be published. Required fields are marked *

error: Content is protected !!