ಮೊದಲ ಹಂತದ ಮತದಾನಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ

75

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿದ್ದು, ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಏಪ್ರಿಲ್ 4 ಕೊನೆಯ ದಿನವಾಗಿದೆ. ಏಪ್ರಿಲ್ 5 ನಾಮಪತ್ರ ಪರಿಶೀಲನೆ.

ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯುವ ದಿನ. ಏಪ್ರಿಲ್ 26ರಂದು ಮತದಾನ. ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ(ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ(ಎಸ್ಸಿ) ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

14 ಕ್ಷೇತ್ರಗಳಲ್ಲಿ ಮೈತ್ರಿಯಂತೆ ಬಿಜೆಪಿ 11, ಜೆಡಿಎಸ್ 3 ಕಡೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಇದೆ.




Leave a Reply

Your email address will not be published. Required fields are marked *

error: Content is protected !!