ಜಿಲ್ಲಾಧಿಕಾರಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನ

97

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿರುವ ವಿಕಲಚೇತನ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಅಣವೀರಪ್ಪ ಗೌಡಗಾಂವ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಣವೀರಪ್ಪ ವಿರುದ್ಧ ಒಂದು ಗುಂಪು ವಿನಾಃಕಾರಣ ದಾಳಿ ಮಾಡುತ್ತಿದ್ದು, ಕೆಲಸದಿಂದ ತೆಗೆದು ಹಾಕಲು ನೋಡುತ್ತಿದೆ ಎಂದು ಆರೋಪಿಸಿ ಈ ರೀತಿ ಮಾಡಿಕೊಂಡಿದ್ದಾನೆ.

ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಅಣವೀರಪ್ಪಗೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!